ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿತು.

 ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿತು.


ವಿಜಯಪುರ : ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಹುನ್ನಾರ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿದ್ದು ಅದರ ಭಾಗವಾಗಿ ರಾಜ್ಯ ಸರ್ಕಾರದ ಧರ್ಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಗಾಂಧಿವೃತ್ತದಿAದ ಆರಂಭಗೊAಡ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನಾ ಸಭೆಯಾಗಿ ಮಾರ್ಪಾಡಾಯಿತು. ರ‍್ಯಾಲಿಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರದ ಘೋಷಣೆ ಕೂಗಿದರು.

ನೇತೃತ್ವ ವಹಿಸಿದ್ದ ಸಂಸದ ರಮೇಶ ಜಿಗಜಿಣಗಿ, ಧರ್ಮಸ್ಥಳ ಪವಿತ್ರ ಕ್ಷೇತ್ರ, ಹಿಂದೂಗಳು ಭಕ್ತಿಭಾವದಿಂದ ನಡೆದುಕೊಳ್ಳುವ ಧರ್ಮಸ್ಥಳದ ಮೇಲೆ ಕಳಂಕ ತರುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ವನಾಶವಾಗುತ್ತದೆ, ಶಿವ ಎಲ್ಲವನ್ನೂ ನೋಡುತ್ತಿದ್ದಾನೆ, ಆತ ಮೂರನೇಯ ಕಣ್ಣು ತೆರೆದರೆ ಕಾಂಗ್ರೆಸ್ ಸರ್ವನಾಶವಾಗುತ್ತದೆ ಎಂದರು. ಯಾರೋ ಒಬ್ಬ ಅವಿವೇಕಿ ಹೇಳಿದ ಮಾತ್ರಕ್ಕೆ ಅಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುವುದೆಂದರೆ ಇನ್ನೇನು? ಇದು ಧರ್ಮವಿರೋಧಿ ಕಾರ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಧರ್ಮಸ್ಥಳದ ವಿಷಯವಾಗಿ ರಾಜ್ಯ ಸರ್ಕಾರ ಅಧರ್ಮದಿಂದ ನಡೆದುಕೊಳ್ಳುತ್ತಿದೆ, ಯಾರದ್ದೋ ಮಾತು ಕೇಳಿ ಈ ರೀತಿ ತನಿಖೆ ನಡೆಸುವುದು ಸರಿಯಲ್ಲ, ಈಗ ತನಿಖೆ ನಡೆದಿದೆ ಎಲ್ಲಿಯೂ ಒಂದು ಮೂಳೆಯೂ ಪತ್ತೆಯಾಗಿಲ್ಲ, ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ತಂದಿದೆ, ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಧರ್ಮಸ್ಥಳ ಒಂದು ಪವಿತ್ರ ಅಧ್ಯಾತ್ಮಿಕ ಕ್ಷೇತ್ರ, ಅನೇಕ ಬಡವರಿಗೆ ಉದ್ಧರಿಸುವ ಪುಣ್ಯಕ್ಷೇತ್ರ, ಅನೇಕ ಮಹಿಳೆಯರು ಇಂದು ಆರ್ಥಿಕವಾಗಿ ಸಬಲರಾಗಿದ್ದಾರೆ, ಶ್ರೇಷ್ಠತೆಗೆ ಇನ್ನೊಂದು ಹೆಸರಾಗಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಪ್ರೋತ್ಸಾಹ ನೀಡಿರುವ ಸರ್ಕಾರದ ಕ್ರಮ ಖಂಡನೀಯ, ಸರ್ಕಾರದ ಈ ನಡೆಯನ್ನು ವ್ಯಾಪಕವಾಗಿ ಖಂಡಿಸಬೇಕಿದೆ, ಧರ್ಮಸ್ಥಳ ಚಲೋ ಹೋರಾಟಕ್ಕೆ ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಹಿರಿಯ ಮುಖಂಡ ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಳುಗೋಡ ಪಾಟಿಲ್ ಉಮೇಶ ಕಾರಜೋಳ, ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ಹಿರಿಯ ಮುಖಂಡರಾದ ವಿವೇಕಾನಂದ ಡಬ್ಬಿ, ಸಂಜೀವ ಐಹೊಳಿ, ನಾಗಠಾಣ ಮಂಡಳ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಗೋಪಾಲ್ ಘಟಕಂಬಳಿ ವಿವೇಕಾನಂದ ಡಬ್ಬಿ ಸುರೇಶ್ ಬಿರಾದಾರ್ ಭೀಮಾಶಂಕರ್ ಹದ್ನೂರ್  ಮಂಜುನಾಥ ಮೀಸೆ, ಸ್ವಪ್ನಾ ಕಣಮುಚನಾಳ,  ಮಲ್ಲಿಕಾರ್ಜುನ ದೇವರಮನಿ, ಭರತ ಕೋಳಿ, ಶ್ರೀಕಾಂತ ಸಿಂಧೆ, ಸಿದ್ದು ಮಖಣಾಪೂರ, ಡಾ.ಸುರೇಶ ಬಿರಾದಾರ, ರಾಜಕುಮಾರ ಸಗಾಯಿ, ಬಸವರಾಜ ಬೈಚಬಾಳ,  ರಾಜೇಶ ತಾವಸೆ, ,  ವಿನೋದ ಕೋಳೂರಗಿ, ವಿಜಯ ಜೋಶಿ, ಸಿದ್ದು ಮಲ್ಲಿಕಾರ್ಜುನ ಮಠ ವಿನಾಯಕ್ ಗೌಳಿ ಶಾಂತಾ ಉತ್ಲಾಸರ, ಮಲ್ಲಮ್ಮ ಜೋಗೂರ, ಸುಷ್ಮಿತಾ, ಕಾಸುಗೌಡ ಬಿರಾದಾರ, ಉಮೇಶ ವೀರಕರ, ವಿಕಾಸ ಪದಕಿ, ಮಹೇಂದ್ರ ನಾಯಕ, ಶಿಲ್ಪಾ ತಾರೇಕರ, ಸಂಗಮೇಶ ಉಕ್ಕಲಿ, ಸಂಗಮೇಶ ಹೌದೆ, ಶಿವಾನಂದ ಭೂಯ್ಯಾರ. ಶರಣು ಸಬರದ, ದೇವೇಂದ್ರ ಹಡ್ಲಗಿ, ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ರವಿಕಾಂತ ಬಗಲಿ, ಕಮಲ, ಆರ್.ಕೆ.ಸುರಪುರ. ಈರಣ್ಣ ಪಟ್ಟಣಶೆಟ್ಟಿ, ಚನ್ನು ಚನಗೊಂಡ, ಅನೀಲ ಉಪ್ಪಾರ. ವಿಜಯ ಹಿರೇಮಠ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು